ADVERTISEMENT

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಮುಂದುವರಿಕೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2024, 2:59 IST
Last Updated 20 ಜುಲೈ 2024, 2:59 IST
<div class="paragraphs"><p>ಶಿವಮೊಗ್ಗದಲ್ಲಿ ಮಳೆ&nbsp;</p></div>

ಶಿವಮೊಗ್ಗದಲ್ಲಿ ಮಳೆ 

   

–ಪ್ರಜಾವಾಣಿ ಚಿತ್ರ

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಿಸಲಾಗಿದೆ.

ADVERTISEMENT

ಶುಕ್ರವಾರ ಸಂಜೆ ಹೊಸನಗರ, ಸಾಗರ, ಸೊರಬ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮಾತ್ರ ರಜೆ ಘೋಷಿಸಿದ್ದ ಜಿಲ್ಲಾಡಳಿತ ಶನಿವಾರ ಮುಂಜಾನೆ ರಜೆಯನ್ನು ಶಿವಮೊಗ್ಗ ಹಾಗೂ ಭದ್ರಾವತಿ, ಶಿಕಾರಿಪುರ ತಾಲ್ಲೂಕುಗಳಿಗೂ ವಿಸ್ತರಿಸಿ ಆದೇಶಿಸಿದೆ.

ಭದ್ರಾ ಜಲಾಶಯ; 46,876 ಕ್ಯುಸೆಕ್ ಒಳಹರಿವು

ಶಿವಮೊಗ್ಗ: ಇಲ್ಲಿನ ಲಕ್ಕವಳ್ಳಿಯ ಭದ್ರಾ ಜಲಾಶಯದಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 46,876 ಕ್ಯುಸೆಕ್ ಒಳಹರಿವು ದಾಖಲಾಗಿದೆ. ನೀರಿನ ಮಟ್ಟ ಒಂದೇ ದಿನ 5 ಅಡಿಯಷ್ಟು ಏರಿಕೆ ಆಗಿದೆ. 186 ಅಡಿ ಗರಿಷ್ಠ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಸದ್ಯ 162.3 ಅಡಿ ನೀರಿನ ಸಂಗ್ರಹ ಇದೆ.

ಶುಕ್ರವಾರ ಬೆಳಿಗ್ಗೆ ಒಳಹರಿವು 49,555 ಕ್ಯುಸೆಕ್ ದಾಖಲಾಗಿತ್ತು. ನೀರಿನ ಸಂಗ್ರಹ 157.11 ಅಡಿ ಇತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 142.1 ಅಡಿ ನೀರಿನ ಸಂಗ್ರಹ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.