ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿರುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಈ ಮೊದಲು ಹೊಸನಗರ, ಸಾಗರ ಹಾಗೂ ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮಾತ್ರ ರಜೆ ಘೋಷಿಸಲಾಗಿತ್ತು. ಈಗ ಸೊರಬ, ಶಿವಮೊಗ್ಗ ಹಾಗೂ ಭದ್ರಾವತಿ, ಶಿಕಾರಿಪುರ ತಾಲ್ಲೂಕುಗಳಿಗೂ ವಿಸ್ತರಿಸಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ನಿರಂತರ ಮಳೆಯಿಂದಾಗಿ ಮಕ್ಕಳ ಸುರಕ್ಷಿತ ಹಿತದೃಷ್ಟಿಯಿಂದ ಈ ದಿನ (ದಿನಾಂಕ 18/7/2024) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ-ತಹಶೀಲ್ದಾರ್ ಶಿಕಾರಿಪುರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.