ಶಿವಮೊಗ್ಗ: ಇಲ್ಲಿನ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಗೆ ಮಂಗಳವಾರ ಚಾಲನೆ ದೊರೆತಿದೆ.
ನಗರದ ಭೀಮೇಶ್ವರ ಗುಡಿಯಲ್ಲಿ ಪ್ರತಿಷ್ಠಾಪಿಸಲಾದ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಮುರುಘಾ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ, ತಹಶೀಲ್ದಾರ್ ಗಿರೀಶ್, ಆರ್ ಎಸ್ ಎಸ್ ಮುಖಂಡ ಪಟ್ಟಾಭಿರಾಮ್ ಚಾಲನೆ ನೀಡಿದರು.
ಈ ವೇಳೆ ಅರ್ಚಕರಾದ ನಾಗಭೂಷಣ ಹಾಗೂ ರಾಮಚರಣ ತಂಡದಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಡೊಳ್ಳು, ಹುಲಿ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯ ನೇತೃತ್ವ ವಹಿಸಿವೆ.
ಕೋಟೆ ಭೀಮೇಶ್ವರ ದೇವಸ್ಥಾನದಿಂದ ಹೊರಟ ಗಣಪತಿ ಮೆರವಣಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ, ಎಎ ವೃತ್ತ ಗೋಪಿ ವೃತ್ತ ಜೈಲು ರಸ್ತೆ,ರಸ್ತೆಯ ಶಿವಮೂರ್ತಿ ವೃತ್ತ, ಮಹಾವೀರ ವೃತ್ತ, ಡಿವಿಎಸ್ ಸರ್ಕಲ್ ಬಿ.ಎಚ್ ರಸ್ತೆ, ಕೋಟೆ ರಸ್ತೆ ಮೂಲಕ ಮತ್ತೆ ಭೀಮೇಶ್ವರ ದೇವಾಲಯದ ಹಿಂಭಾಗಕ್ಕೆ ಬಂದು ಅಲ್ಲಿ ರಾತ್ರಿ 2 ಗಂಟೆಗೆ ತುಂಗಾ ನದಿಯಲ್ಲಿ ಗಣಪತಿ ವಿಸರ್ಜಿಸಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.