ADVERTISEMENT

ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಅಗತ್ಯ

ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಿ.ಎಸ್. ಯಡಿಯೂರಪ್ಪ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 6:00 IST
Last Updated 18 ನವೆಂಬರ್ 2022, 6:00 IST
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಗುರುವಾರ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು.
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಗುರುವಾರ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಯಿತು.   

ಶಿಕಾರಿಪುರ: ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಪ್ರಾಮಾಣಿಕ ಕೈಗಳ ಅವಶ್ಯಕತೆ ಇದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಕಿವಿಮಾತು ಹೇಳಿದರು.

ಪಟ್ಟಣದಲ್ಲಿ ಗುರುವಾರ ವಿವಿಧ ಸಹಕಾರ ಸಂಘಗಳು ಆಯೋಜಿಸಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕ ಕೈಗಳ ಕೊರತೆಯಿಂದ ಕೆಲವು ಸಮಸ್ಯೆಗಳು ಕಾಣುತ್ತಿವೆ. ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ನೀವು ಎತ್ತರಕ್ಕೆ ಬೆಳೆಯಬಹುದು. ಆ ಮೂಲಕ ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಸಂಕಲ್ಪ ಮಾಡಬೇಕು. ಸಹಕಾರಿ ಬಂಧುಗಳು ನೆಮ್ಮದಿಯಿಂದ ಜೀವನ ನಡೆಸಲು ಅವಕಾಶ ಕಲ್ಪಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಜನಸಾಮಾನ್ಯರ ಕಾಮಧೇನು ಸಹಕಾರ ಕ್ಷೇತ್ರವಾಗಿದೆ. ಕೋವಿಡ್ ಸಂದರ್ಭದಲ್ಲಿ ದೇಶ ಆರ್ಥಿಕ ಸಮತೋಲನ ಹೊಂದಲು ಸಹಕಾರ ಕ್ಷೇತ್ರ ಕಾರಣವಾಗಿದೆ. ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಆದ್ಯತೆ ನೀಡಬೇಕು’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಎಲ್.ಜಗದೀಶ್ವರ್ ಅಧ್ಯಕ್ಷತೆ ವಹಿಸಿದ್ದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ ಸಿಂಗ್, ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳ ಅಧ್ಯಕ್ಷ ಬಿ.ಡಿ ಭೂಕಾಂತ್, ಶಿಮುಲ್ ಅಧ್ಯಕ್ಷ ಶ್ರೀಪಾದರಾವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಗಡಿ ಅಶೋಕ್, ಗುರುರಾಜ್ ಜಕ್ಕಿನಕೊಪ್ಪ, ವಿವಿಧ ಸಹಕಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.