ADVERTISEMENT

ದ್ವೇಷದ ರಾಜಕಾರಣ ಗೊತ್ತಿಲ್ಲ: ಶಾಸಕ ಗೋಪಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:55 IST
Last Updated 14 ಮಾರ್ಚ್ 2024, 15:55 IST
ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು
ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು   

ಹೊಸನಗರ: ‘ಬಂಗಾರಪ್ಪ ಅವರ ಗರಡಿಯಲ್ಲಿ ಬೆಳೆದವನು ನಾನು. ನನಗೆ ದ್ವೇಷದ ರಾಜಕಾರಣ ಗೊತ್ತಿಲ್ಲ. ಅಭಿವೃದ್ಧಿ ಕಾರ್ಯಗಳು ಮಾತ್ರ ಗೊತ್ತು. ಈ ವಿಚಾರದಲ್ಲಿ ನಾನು ಪಕ್ಷ, ಜಾತಿ ರಾಜಕಾರಣ ಮಾಡಿಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಪಟ್ಟಣದ ಹೊರವಲಯ ಮಾವಿನಕೊಪ್ಪದಲ್ಲಿ ನೂತನ ಬಸ್ ನಿಲ್ದಾಣ ಮತ್ತು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜೆಜೆಎಂ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಜನರು ಸರ್ಕಾರವನ್ನು ಮನಸಾರೆ ಮೆಚ್ಚಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆ ಬಗ್ಗೆ ಅಪಪ್ರಚಾರ ಮಾಡುವವರು ನನ್ನ ಬಳಿ ಬಂದು ಮಾತನಾಡಲಿ. ಎಲ್ಲೋ ಮಾತನಾಡಿದರೆ ಅದಕ್ಕೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

ADVERTISEMENT

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿ, ಚಿರತೆ ಕಾಡುಪ್ರಾಣಿಗಳ ಕಾಟ ಹೆಚ್ಚುತ್ತಿದೆ. ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಗ್ರಾಮದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವುದರಿಂದ ಭಯದ ವಾತವರಣ ಸೃಷ್ಟಿಯಾಗಿದೆ. ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ. ಸಂಬಂಧಪಟ್ಟವರು ಈಗಲಾದರೂ ಗಮನಹರಿಸಬೇಕು ಎಂದು ಉಪಾಧ್ಯಕ್ಷೆ ಸುಧಾ ಆಗ್ರಹಿಸಿದರು.

ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಂಕೇಶಗೌಡ, ಉಪಾಧ್ಯಕ್ಷೆ ಸುಧಾ, ಸದಸ್ಯರಾದ ಕಾಲಸಸಿ ಸತೀಶ್, ಶ್ರೀಧರ್ ಉಪಸ್ಥಿತರಿದ್ದರು. ಸದಸ್ಯೆ ದಿವ್ಯ ಪ್ರವೀಣ್ ಸ್ವಾಗತಿಸಿದರು. ಸದಸ್ಯ ಮಹೇಂದ್ರ ನಾಗೇಶ್ ಪ್ರಸ್ತಾವಿಕವಾಗಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.