ADVERTISEMENT

ರೈತರಿಂದಲೇ ಮುಂಗಾರು ಬೆಳೆ ಸಮೀಕ್ಷೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 13:01 IST
Last Updated 11 ಜುಲೈ 2024, 13:01 IST
ಸಚಿನ್ ಹೆಗಡೆ
ಸಚಿನ್ ಹೆಗಡೆ   

ಹೊಸನಗರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ ಅಭಿವೃದ್ಧಿಪಡಿಸಲಾಗಿದೆ. ಫ್ರೂಟ್ಸ್ ತಂತ್ರಾಂಶದ ಎಫ್‌.ಐ.ಡಿ. ಹೊಂದಿರುವ ರೈತರು ಸಮೀಕ್ಷೆ ನಡೆಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಸಚಿನ್ ಹೆಗಡೆ ತಿಳಿಸಿದ್ದಾರೆ.

‘ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ’ ಆಯ್ಕೆ ಮಾಡಿ ಆಧಾ‌ರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಒ.ಟಿ.ಪಿ. ಆಯ್ಕೆಯನ್ನು ಮಾಡಬೇಕು. ಅನಂತರ ಆಧಾ‌ರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಒ.ಟಿ.ಪಿ.ಯನ್ನು ದಾಖಲಿಸಬೇಕು. ರೈತರ ಎಫ್.ಐ.ಡಿ. ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್ಲೋಡ್ ಆಗುತ್ತದೆ. ಎಫ್.ಐ.ಡಿ. ಸಂಖ್ಯೆಗೆ ಯಾವುದಾದರೂ ಸರ್ವೇ ನಂಬರ್‌ಗಳು ಜೋಡಣೆಯಾಗದಿದ್ದಲ್ಲಿ ಸೇರಿಸಿಕೊಳ್ಳಲು ಸಹ ಮೊಬೈಲ್‌ ಆ್ಯಪ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರಧನ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಬಹುದಾಗಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.