ADVERTISEMENT

ಸರ್ಕಾರಿ ಶಾಲೆ– ಕಾಲೇಜುಗಳ ಅಭಿವೃದ್ಧಿಗೆ ಕೈಜೋಡಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 14:30 IST
Last Updated 26 ನವೆಂಬರ್ 2024, 14:30 IST
ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ಕಾಮಗಾರಿಗೆ ಸೋಮವಾರ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು
ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ಕಾಮಗಾರಿಗೆ ಸೋಮವಾರ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು    

ಸಾಗರ: ‘ಸರ್ಕಾರಿ ಶಾಲಾ ಕಾಲೇಜುಗಳ ಅಭಿವೃದ್ಧಿಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಕೈ ಜೋಡಿಸಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದ್ದಾರೆ.

ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಂ.ಆರ್.ಐ.ಎಲ್ ಸಂಸ್ಥೆ ನೆರವಿನಿಂದ ₹ 43 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶೌಚಾಲಯ ಕಟ್ಟಡ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳ ಮಕ್ಕಳಿಗೆ ಮೊಟ್ಟೆ ವಿತರಿಸಲು ಅಜೀಂ ಪ್ರೇಮ್ ಜೀ ಫೌಂಡೇಷನ್ ಕೋಟ್ಯಂತರ ರೂಪಾಯಿ ನೆರವನ್ನು ರಾಜ್ಯ ಸರ್ಕಾರಕ್ಕೆ ನೀಡಿರುವುದು ಮಾದರಿಯ ನಡೆ ಆಗಿದೆ. ಆರ್ಥಿಕವಾಗಿ ಸಬಲರಾಗಿರುವ ವ್ಯಕ್ತಿ, ಸಂಸ್ಥೆಗಳು ಸರ್ಕಾರಿ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಉದಾರ ಮನಸ್ಸಿನ ನೆರವು ನೀಡಬೇಕು’ ಎಂದು ವಿನಂತಿಸಿದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ಸತ್ಯನಾರಾಯಣ, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎ.ಇಂದೂಧರ ಗೌಡ, ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಗಣಪತಿ ಮಂಡಗಳಲೆ, ಕಲಸೆ ಚಂದ್ರಪ್ಪ, ಉಮೇಶ್ ಸೂರನಗದ್ದೆ, ಭವ್ಯ ಕೃಷ್ಣಮೂರ್ತಿ, ಸಲೀಂ, ಎಲ್.ಚಂದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.