ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಲಕ್ಕವಳ್ಳಿಯ ಭದ್ರಾ ಜಲಾಶಯ ಈ ಮುಂಗಾರು ಹಂಗಾಮಿನ ದಾಖಲೆಯ ಪ್ರಮಾಣದ ಒಳಹರಿವು ದಾಖಲಿಸಿದೆ.
ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 42,165 ಕ್ಯುಸೆಕ್ ಒಳಹರಿವು ದಾಖಲಾಗಿದೆ. ನೀರಿನ ಮಟ್ಟ 4.4 ಅಡಿ ಏರಿಕೆ ಆಗಿದೆ. 186 ಅಡಿ ಗರಿಷ್ಠ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಸದ್ಯ 153 ಅಡಿ ನೀರಿನ ಸಂಗ್ರಹ ಇದೆ.
ಬುಧವಾರ ಬೆಳಿಗ್ಗೆ ಒಳಹರಿವು 34,544 ಕ್ಯುಸೆಕ್ ಒಳಹರಿವು ದಾಖಲಾಗಿತ್ತು. ನೀರಿನ ಸಂಗ್ರಹ 148.6 ಅಡಿ ಇತ್ತು.
ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 141.5 ಅಡಿ ನೀರಿನ ಸಂಗ್ರಹ ಇತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.