ADVERTISEMENT

ತುಂಗಾ ಜಲಾಶಯ: ನದಿಗೆ 73 ಸಾವಿರ ಕ್ಯುಸೆಕ್ ನೀರು, ಶಿವಮೊಗ್ಗದಲ್ಲಿ ಪ್ರವಾಹ ಭೀತಿ

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 3:09 IST
Last Updated 18 ಜುಲೈ 2024, 3:09 IST
<div class="paragraphs"><p>ಗಾಜನೂರಿನ ತುಂಗಾ ಜಲಾಶಯದ ಕ್ರಸ್ಟ್ ಗೇಟ್‌ಗಳ ತೆರೆದು ನದಿಗೆ ನೀರು ಹರಿಸಲಾಗುತ್ತಿದೆ</p></div>

ಗಾಜನೂರಿನ ತುಂಗಾ ಜಲಾಶಯದ ಕ್ರಸ್ಟ್ ಗೇಟ್‌ಗಳ ತೆರೆದು ನದಿಗೆ ನೀರು ಹರಿಸಲಾಗುತ್ತಿದೆ

   

ಶಿವಮೊಗ್ಗ: ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಇಲ್ಲಿನ ಗಾಜನೂರಿನ ತುಂಗಾ ಜಲಾಶಯಕ್ಕೆ ಈ ಮುಂಗಾರು ಹಂಗಾಮಿನಲ್ಲಿ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 6 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 71,864 ಕ್ಯುಸೆಕ್ ಒಳಹರಿವು ದಾಖಲಾಗಿದೆ. 588.24 ಮೀಟರ್, 3.24 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯ ಈಗಾಗಲೇ ಭರ್ತಿಯಾಗಿದೆ.

ADVERTISEMENT

ಹೀಗಾಗಿ ಜಲಾಶಯದ 22 ಕ್ರಸ್ಟ್ ಗೇಟ್‌ಗಳನ್ನು ತೆರೆದು ತುಂಗಾ ನದಿಗೆ 73,391 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.

ಸನ್ನದ್ಧ ಸ್ಥಿತಿ:

ಜಲಾಶಯದಿಂದ 80 ಸಾವಿರ ಕ್ಯುಸೆಕ್ ನೀರು ನದಿಗೆ ಹರಿಸಿದರೆ ತುಂಗಾ ನದಿಯ ಪ್ರವಾಹದ ಸ್ಥಿತಿ ತಲೆದೋರಲಿದೆ. ಶಿವಮೊಗ್ಗ ನಗರದ ಇಮಾಮ್ ಬಾಡ, ಬಾಪೂಜಿ ನಗರ ಸೇರಿದಂತೆ ನದಿ ದಂಡೆಯ ಜನವಸತಿ ಪ್ರದೇಶಕ್ಕೆ ನೀರು ನುಗ್ಗಲಿದೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಹಾನಗರ ಪಾಲಿಕೆಯಿಂದ ಶಿವಮೊಗ್ಗದ ಮೂರು ಕಡೆ ಕಾಳಜಿ ಕೇಂದ್ರ ತೆರೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.