ರಿಪ್ಪನ್‌ಪೇಟೆ: ‘ಕನ್ನಡ ನಾಡು, ನುಡಿಯ ಅಸ್ಮಿತೆಗೆ ವಿದ್ಯಾವಂತರು ಕಟಿಬದ್ಧರಾಗಬೇಕು. ಕನ್ನಡ ಅಭಿವೃದ್ಧಿಯಲ್ಲಿ ಎಲ್ಲರೂ ಭಾಗಿಯಾಗುವುದು ವರ್ತಮಾನದ ಅಗತ್ಯ’ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ ನೀಡಿದರು.
ಪಟ್ಟಣದಲ್ಲಿ ಶನಿವಾರ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದಿಂದ ಶನಿವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದ ಸಮಾರಂಭದಲ್ಲಿ ಅವರು ಮಾತನಾಡಿದರು.
ನಾಡಿನ ಏಕತೆಗಾಗಿ ಎಲ್ಲ ಸಮುದಾಯಗಳು ತಮ್ಮೊಳಗಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಭಾಷೆಯ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಬೇಕು. ಕನ್ನಡ ಭಾಷೆಯನ್ನು ಗೌರವಿಸಬೇಕು ಎಂದು ಮನವಿ ಮಾಡಿದರು.
ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿದರು.
ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ಶಿಮುಲ್‌ನ ವಿದ್ಯಾಧರ್, ಸಹಕಾರಿ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಸೇರಿದಂತೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.