ಶಿವಮೊಗ್ಗ : ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಮಂಗಳವಾರ ವಹಿಸಿಕೊಂಡರು.
ಸರ್ಕಾರ ಮುಂದಿನ ಆದೇಶದವರೆಗೆ ಕುಲಸಚಿವರಾಗಿ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಅವರನ್ನು ನೇಮಕ ಮಾಡಿದೆ.
ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವ ಹುದ್ದೆಗೆ ಐಎಎಸ್ ಇಲ್ಲವೇ ಕೆಎಎಸ್ ದರ್ಜೆಯ ಅಧಿಕಾರಿಗಳನ್ನು ನೇಮಿಸಬೇಕು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಿ 10 ದಿನಗಳ ಹಿಂದಷ್ಟೇ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪಿ.ಕಣ್ಣನ್ ಅವರನ್ನು ನೇಮಕ ಮಾಡಲಾಗಿತ್ತು.
ಅದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಕಣ್ಣನ್ ಅವರನ್ನು ಸರ್ಕಾರ ಹುದ್ದೆಯಿಂದ ಬಿಡುಗಡೆ ಮಾಡಿದೆ. ಹೀಗಾಗಿ ಲೋಖಂಡೆ ಅಧಿಕಾರ ಸ್ವೀಕರಿಸಿದ್ದಾರೆ.
2017ರ ಬ್ಯಾಚ್‌ನ ಅಧಿಕಾರಿ ಆಗಿರುವ ಸ್ನೇಹಲ್ ಲೋಖಂಡೆ ಕಳೆದ ಮಾರ್ಚ್ 28ರಿಂದ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.