ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆಯಿಂದ ಉದ್ಯಮನಿಧಿ ಯೋಜನೆಯಡಿ ₹ 3 ಕೋಟಿ ವೆಚ್ಚದಲ್ಲಿ ಇಲ್ಲಿನ ಗಾಂಧಿನಗರ ಬಡಾವಣೆಯಲ್ಲಿ ನಿರ್ಮಿಸಿರುವ 15 ಮಳಿಗೆಗಳ ವಾಣಿಜ್ಯ ಸಂಕೀರ್ಣವನ್ನು ಭಾನುವಾರ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು.
ರಾಜ್ಯ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಭೂಪಾಲ್, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ನಾಗರಾಜ ಕಂಕಾರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.