ಕಾರ್ಗಲ್: ‘ಲಿಂಗನಮಕ್ಕಿ ಜಲಾನಯನ ಪ್ರದೇಶದ ಹಿನ್ನೀರ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನೀರಿನ ಒಳಹರಿವು ಹೆಚ್ಚಾಗಿದೆ. ಆದ್ದರಿಂದ ಸೋಮವಾರ ರಾತ್ರಿ 7 ಗಂಟೆಯ ಬಳಿಕ 9 ರೇಡಿಯಲ್ ಗೇಟ್ ಮೂಲಕ 20,000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ’ ಎಂದು ಕೆಪಿಸಿ ಅಧೀಕ್ಷಕ ಎಂಜಿನಿಯರ್ ಆರ್.ಶಿವಕುಮಾರ್ ಮಾಹಿತಿ ನೀಡಿದರು.
ಮಧ್ಯಾಹ್ನ 5 ಗೇಟ್‌ಗಳನ್ನು ತೆರೆದು ನೀರು ಹೊರಕ್ಕೆ ಬಿಡಲಾಗಿತ್ತು, ಬಳಿಕ 7 ಗೇಟ್‌ಗಳನ್ನು ತೆರೆಯಲಾಗಿತ್ತು.
‘ನದಿ ಪಾತ್ರದಲ್ಲಿರುವ ನಿವಾಸಿಗಳಿಗೆ ಧ್ವನಿವರ್ಧಕದ ಮೂಲಕ ಸಿಬ್ಬಂದಿ ಎಚ್ಚರಿಕೆ ನೀಡಿದ್ದು, ನದಿಗೆ ಇಳಿಯದಂತೆ ಮತ್ತು ಜಾನುವಾರುಗಳನ್ನು ನದಿ ಪಾತ್ರಕ್ಕೆ ಬಿಡದಂತೆ ತಿಳಿಸಲಾಗಿದೆ. ಪ್ರಥಮ ಹಂತದಲ್ಲಿ ಕಡಿಮೆ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿದೆ. ಅಣೆಕಟ್ಟೆಯ ಒಳಹರಿವಿನ ಪ್ರಮಾಣವನ್ನು ಆಧರಿಸಿ ಯಾವುದೇ ಕ್ಷಣದಲ್ಲಾದರೂ ಹೆಚ್ಚಿನ ನೀರನ್ನು ಹೊರಗೆ ಬಿಡಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.