ADVERTISEMENT

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧವಿಲ್ಲ: ಯತೀಶ್

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 15:10 IST
Last Updated 19 ಮಾರ್ಚ್ 2024, 15:10 IST
ಸಾಗರದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತಹಶೀಲ್ದಾರ್ ಕಲೀಮುಲ್ಲಾ ಖಾನ್ ಮತ್ತು ಉಪವಿಭಾಗಾಧಿಕಾರಿ ಯತೀಶ್ ಆರ್. ಪಾಲ್ಗೊಂಡಿದ್ದರು
ಸಾಗರದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತಹಶೀಲ್ದಾರ್ ಕಲೀಮುಲ್ಲಾ ಖಾನ್ ಮತ್ತು ಉಪವಿಭಾಗಾಧಿಕಾರಿ ಯತೀಶ್ ಆರ್. ಪಾಲ್ಗೊಂಡಿದ್ದರು   

ಸಾಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮದುವೆ ಮತ್ತಿತರ ಶುಭ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ, ಸ್ಥಳೀಯ ಸಂಸ್ಥೆಗಳಿಂದ ಇಂತಹ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕು ಎಂದು ಉಪವಿಭಾಗಾಧಿಕಾರಿ ಯತೀಶ್ ಆರ್. ತಿಳಿಸಿದರು.

ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಮದುವೆ ಮತ್ತಿತರ ಸಮಾರಂಭಗಳಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅಭ್ಯರ್ಥಿಗಳು ಚುನಾವಣಾ ಪ್ರಚಾರ ನಡೆಸಿದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಸಾಗರ ತಾಲ್ಲೂಕಿನ ನಾಗೋಡಿ, ಚೂರಿಕಟ್ಟೆ ಸೇರಿ ವಿವಿಧೆಡೆ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಅಹೋರಾತ್ರಿ ಈ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದು, ವಾಹನಗಳ ತಪಾಸಣೆ ನಡೆಸುವರು ಎಂದು ಅವರು ತಿಳಿಸಿದರು.

ADVERTISEMENT

ಪ್ರತಿ ಹೋಬಳಿಗೆ ಒಂದರಂತೆ ನಾಲ್ಕು ತಂಡವನ್ನು ವಿಡಿಯೊ ಚಿತ್ರೀಕರಣಕ್ಕಾಗಿ ಸಿದ್ಧಪಡಿಸಲಾಗಿದೆ. ಚುನಾವಣಾ ಅಕ್ರಮವನ್ನು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿ, ಸಿಬ್ಬಂದಿ ಜೊತೆ ಈ ತಂಡವು ಪ್ರತಿಯೊಂದು ರಾಜಕೀಯ ಪಕ್ಷಗಳ ಚಟುವಟಿಕೆ, ಚಲವಲನಗಳ ಮೇಲೆ ನಿಗಾ ಇರಿಸಲಿದೆ ಎಂದು ಅವರು ಹೇಳಿದರು.

ತಹಶೀಲ್ದಾರ್ ಕರೀಮುಲ್ಲಾ ಖಾನ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.