ADVERTISEMENT

ಅರ್ಚಕರ ಮನೆ ಎದುರು ರಾಜಕೀಯ ಸಭೆ: ಕೆ.ಎಸ್‌ ಈಶ್ವರಪ್ಪ ವಿರುದ್ದ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2024, 17:00 IST
Last Updated 6 ಏಪ್ರಿಲ್ 2024, 17:00 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಶಿವಮೊಗ್ಗ: ಅನುಮತಿ ಪಡೆಯದೇ ದೇವಸ್ಥಾನದ ಅರ್ಚಕರ ಮನೆಯ ಎದುರು ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನವೊಂದರಲ್ಲಿ ಏಪ್ರಿಲ್ 5 ರಂದು ಪೂಜಾ ಕಾ‍ರ್ಯಕ್ರಮ ನೆರವೇರಿಸಿದ್ಸ ಕೆ.ಎಸ್. ಈಶ್ವರಪ್ಪ, ಅಲ್ಲಿಯೇ ಹತ್ತಿರದ ಅರ್ಚಕರ ಮನೆಗೆ ಹೋಗಿ, ಅವರ ಮನೆಯ ಅಂಗಳದಲ್ಲಿ ಸಭೆ ನಡೆಸಿ ಭಾಷಣ ಮಾಡಿದ್ದಾರೆ.

ಹೀಗಾಗಿ ನ್ಯಾಯಾಲಯದ ಅನುಮತಿ ಪಡೆದು ಕೆ.ಎಸ್‌ ಈಶ್ವರಪ್ಪ ವಿರುದ್ದ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.