ADVERTISEMENT

ಸಚಿವ ಮಧು ಬಂಗಾರಪ್ಪ ಶಿವಮೊಗ್ಗಕ್ಕೆ ಇಂದು

-

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 16:09 IST
Last Updated 10 ಜುಲೈ 2024, 16:09 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಜುಲೈ 11ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ವಿಧಾನಪರಿಷತ್ ನೂತನ ಸದಸ್ಯೆ ಬಲ್ಕಿಶ್‌ ಬಾನು ಅವರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅರಣ್ಯ ಭವನದಲ್ಲಿ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಅರಣ್ಯ ಇಲಾಖೆ ಪರಾಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT