ADVERTISEMENT

ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಶಾಸಕ ಸಂಗಮೇಶ್ವರ್

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 13:37 IST
Last Updated 12 ಡಿಸೆಂಬರ್ 2023, 13:37 IST
ಭದ್ರಾವತಿ ವಿ.ಐ.ಎಸ್.ಎಲ್ ಕ್ರೀಡಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಿದರು
ಭದ್ರಾವತಿ ವಿ.ಐ.ಎಸ್.ಎಲ್ ಕ್ರೀಡಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಚಾಲನೆ ನೀಡಿದರು   

ಭದ್ರಾವತಿ: ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದರು.

ತರಳಬಾಳು ಹುಣ್ಣಿಮೆ ಪ್ರಯುಕ್ತ ಇಲ್ಲಿನ ಭದ್ರಾ ಪ್ರೌಢಶಾಲೆ ವತಿಯಿಂದ ಆಯೋಜಿಸಿದ್ದ ಚಿತ್ರದುರ್ಗ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಶಿವಮೊಗ್ಗ ವಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಈ ಮೂಲಕ ಮಕ್ಕಳಲ್ಲಿ ಲವಲವಿಕೆ ಮೂಡಲಿದೆ ಎಂದು ಹೇಳಿದರು.

ADVERTISEMENT

ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಉಪಾಧ್ಯಕ್ಷ ಭುವನೇಶ್ವರ್, ನಿರ್ದೇಶಕರಾದ ಪರಮೇಶ್ವರಪ್ಪ, ಎಂ.ಎಸ್.ರವಿ, ಮಲ್ಲಿಕಾರ್ಜುನ, ಚಂದ್ರಶೇಖರ್, ವಿಜಯಕುಮಾರ್, ಎಚ್‌.ಎಸ್.ಮಲ್ಲಿಕಾರ್ಜುನ, ಜಗದೀಶ್, ಚಂದ್ರಪ್ಪ, ಎ.ಎಸ್.ಮಲ್ಲಿಕಾರ್ಜುನ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಬಾಲರಾಜ ಇದ್ದರು.

ಕ್ರೀಡಾಕೂಟದಲ್ಲಿ ಒಟ್ಟು 13 ಶಾಲೆಗಳ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸಿದ್ದವು. ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಲಿಂಗೇಗೌಡ, ಅಪೇಕ್ಷ ಮಂಜುನಾಥ್, ಸಿದ್ದಪ್ಪ ಸೇರಿ 20 ಜನರು  ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.