ADVERTISEMENT

ಸಮಾಜಕ್ಕೆ ಮಠಗಳ ಕೊಡುಗೆ ಅನನ್ಯ: ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 6:40 IST
Last Updated 24 ಸೆಪ್ಟೆಂಬರ್ 2021, 6:40 IST
ಸೊರಬ ತಾಲ್ಲೂಕಿನ ದಿಂಡದಹಳ್ಳಿ, ಬಿಳವಾಣಿ ಗ್ರಾಮದ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಶೈಲ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು
ಸೊರಬ ತಾಲ್ಲೂಕಿನ ದಿಂಡದಹಳ್ಳಿ, ಬಿಳವಾಣಿ ಗ್ರಾಮದ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ನಡೆದ ಸಮಾರಂಭದಲ್ಲಿ ಶ್ರೀಶೈಲ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು   

ಸೊರಬ: ನಾಡಿನಲ್ಲಿ ಮಠ, ಭಕ್ತರು ಹಾಗೂ ಸ್ವಾಮೀಜಿಗಳು ತ್ರಿವೇಣಿ ಸಂಗಮದಂತೆ ಆಧ್ಯಾತ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರಿಂದ ಮಠಗಳಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಶ್ರೀಶೈಲದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಗುರುವಾರ ತಾಲ್ಲೂಕಿನ ದಿಂಡದಹಳ್ಳಿ, ಬಿಳವಾಣಿ ಗ್ರಾಮದ ಪಶುಪತಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಮಠದಲ್ಲಿ ನಡೆದ ಸಮುದಾಯ ಭವನ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದರು.

ಭಕ್ತರು ಹಾಗೂ ಮಠದ ನಡುವಿನ ಸಂಬಂಧ ನೀರು ಮತ್ತು ಮೀನಿನ ಸಂಬಂಧವಿದ್ದಂತೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಠ ಹಾಗೂ ಸ್ವಾಮೀಜಿಗಳ ಪಾತ್ರ ಮಹತ್ವದ್ದು ಎಂದರು.

ADVERTISEMENT

ಸಂಸದ ಬಿ.ವೈ. ರಾಘವೇಂದ್ರ, ‘ಜಿಲ್ಲೆಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದ್ದು, ಹೊಸ ರೈಲ್ವೆ ಸಂಪರ್ಕದ ಮೂಲಕ ಪ್ರವಾಸೋದ್ಯಮದಲ್ಲಿ ಜಿಲ್ಲೆ ಗುರುತಿಸಿಕೊಳ್ಳಲಿದೆ. ದೊಡ್ಡ ದೊಡ್ಡ ಕಂಪನಿಗಳ ಸ್ಥಾಪನೆಯಿಂದ ಯುವಕರಿಗೆ ಉದ್ಯೋಗಾವಕಾಶ ದೊರೆಯಲಿದೆ’ ಎಂದರು.

ದಿಂಡದಹಳ್ಳಿ, ಬಿಳವಾಣಿ ಮಠದ ಪಶುಪತಿ ಶಿವಾನಂದ ಸ್ವಾಮೀಜಿ, ತೊಗರ್ಸಿ ಹಿರೇಮಳಲಿ ಮಠದ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಅಂಬಿಕ ಸ್ವಾಮೀಜಿ, ಬಿಳವಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಗುರವಪ್ಪ, ಉಪಾಧ್ಯಕ್ಷ ಬಸವರಾಜ್, ಸದಸ್ಯರಾದ ನಂದೀಶ್, ಶೃತಿ ಜಯಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಪುಟ್ಟರಾಜಗೌಡ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ಅರಣ್ಯ ನಿಗಮದ ಉಪಾಧ್ಯಕ್ಷ ರೇವಣಪ್ಪ, ಗುರವಪ್ಪ, ಮಲ್ಲಿಕಾರ್ಜುನಗೌಡ, ಶಿಕ್ಷಕ ಅರುಣಕುಮಾರ್, ಷಣ್ಮುಖ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.