ಶಿವಮೊಗ್ಗ: ಒಳಮೀಸಲಾತಿ ವರ್ಗೀಕರಣ ಕುರಿತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಬುಧವಾರ ಗಾಡಿಕೊಪ್ಪದ ರಾಷ್ಟ್ರೀಯ ಹೆದ್ದಾರಿ– 206ರಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದರು.
ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ, ಶಾಸಕ ಹಾಗೂ ಸಂಸದರ ಅಣಕು ಶವಯಾತ್ರೆ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಬಿಜೆಪಿ ಸರ್ಕಾರ ಬಂಜಾರ ಸಮುದಾಯಕ್ಕೆ ದ್ರೋಹ ಬಗೆದಿದೆ. ಒಳ ಮೀಸಲಾತಿ ಶಿಫಾರಸನ್ನು ಹಿಂಪಡೆಯುವವರೆಗೆ ಯಾವುದೇ ರಾಜಕೀಯ ಪಕ್ಷದ ನಾಯಕರು, ತಾಂಡಾದ ಒಳಗೆ ಪ್ರವೇಶ ಮಾಡುವಂತಿಲ್ಲ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ’ ಎಂದು ಎಚ್ಚರಿಸಿದರು.
ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ರಸ್ತೆಯ ಮತ್ತೊಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ನಾಯಕ್, ಡಾವ್, ಕಾರ್ ಭಾರಿ ಹಾಗೂ ಸಮುದಾಯದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.