ADVERTISEMENT

ಕಸ್ತೂರಿ ರಂಗನ್‌ ವರದಿ ಜಾರಿಗೆ ಆಕ್ರೋಶ: ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2022, 3:09 IST
Last Updated 17 ಜುಲೈ 2022, 3:09 IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಕಲ್ಲೂರು ಮೇಘರಾಜ್ ನೇತೃತ್ವದಲ್ಲಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಕಲ್ಲೂರು ಮೇಘರಾಜ್ ನೇತೃತ್ವದಲ್ಲಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಲಾಯಿತು.   

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ ನಡೆಸಿದರು.

ಪಶ್ಚಿಮ ಘಟ್ಟಗಳ 10 ಜಿಲ್ಲೆಗಳನ್ನೊಳಗೊಂಡ 20 ಸಾವಿರ ಚದರ ಕಿ.ಮೀ ಪ್ರದೇಶವನ್ನು ಕೇಂದ್ರದ ಪರಿಸರ ಇಲಾಖೆ ಅವೈಜ್ಞಾನಿಕವಾಗಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ
ಮಾಡಿದೆ. ಇದು ಜನವಿರೋಧಿ. ಇದರಿಂದ ಅರಣ್ಯವಾಸಿ ಹಾಗೂ ಆದಿವಾಸಿಗಳ ಬದುಕನ್ನು ಕಸಿದುಕೊಂಡಂತಾಗುತ್ತದೆ. ಈಗಿರುವ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಕಾನೂನುಗಳನ್ನೇ ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಸಾಕು. ಹೊಸ ಆದೇಶವೇನೂ ಬೇಕಾಗಿಲ್ಲ ಎಂದು ಪ್ರತಿಭಟನಕಾರರು ತಿಳಿಸಿದರು.

ಸರ್ಕಾರ ತಕ್ಷಣವೇ ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ADVERTISEMENT

ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಪ್ರಮುಖರಾದ ಎಲ್.ಆರ್. ಗೋಪಾಲಕೃಷ್ಣ, ಎಚ್.ಎಂ. ಸಂಗಯ್ಯ, ಟಿ.ಆರ್. ಕೃಷ್ಣಪ್ಪ, ಎಸ್.ವಿ. ರಾಜಮ್ಮ, ಚಾಬೂಸಾಬ್, ಶಂಕ್ರಾನಾಯ್ಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.