ADVERTISEMENT

ಭದ್ರಾವತಿ: 5 ಕೆ.ಜಿ. ಒಣ ಗಾಂಜಾ ಸೊಪ್ಪು ವಶ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 16:02 IST
Last Updated 27 ಅಕ್ಟೋಬರ್ 2024, 16:02 IST

ಭದ್ರಾವತಿ: ಮನೆಯಲ್ಲಿ ದಾಸ್ತಾನು ಮಾಡಿದ್ದ 5 ಕೆ.ಜಿ. ತೂಕದ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಾಲ್ಲೂಕಿನ ದರದಲ್ಲಿ ಗ್ರಾಮದ ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪಾಧೀಕ್ಷಕ ಕೆ.ಆರ್ . ನಾಗರಾಜು ಅವರ ನೇತೃತ್ವದ ತಂಡ ದಾಳಿ ನಡೆಸಿ, ₹2.80 ಲಕ್ಷ ಮೌಲ್ಯದ ಒಣ ಗಾಂಜಾ ಸೊಪ್ಪು ವಶಪಡಿಸಿಕೊಂಡಿದೆ. 

ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.