ADVERTISEMENT

ಖಾಸಗಿ ಬಸ್ ಪಲ್ಟಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2019, 4:59 IST
Last Updated 19 ಏಪ್ರಿಲ್ 2019, 4:59 IST
ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮದ ಬಳಿ ಬುಧವಾರ ತಡರಾತ್ರಿ ಖಾಸಗಿ ಬಸ್ ಪಲ್ಟಿಯಾಗಿರುವುದು
ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮದ ಬಳಿ ಬುಧವಾರ ತಡರಾತ್ರಿ ಖಾಸಗಿ ಬಸ್ ಪಲ್ಟಿಯಾಗಿರುವುದು   

ಸಾಗರ: ತಾಲ್ಲೂಕಿನ ಉಳ್ಳೂರು ಗ್ರಾಮದ ಸಮೀಪ ಬುಧವಾರ ತಡರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಒಂದೇ ಕುಟುಂಬದ ಇಬ್ಬರು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಟ್ಕಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಸೀಬರ್ಡ್ ಬಸ್ ಪಲ್ಟಿಯಾದ ಕಾರಣ ಹೊನ್ನಾವರ ಸಮೀಪದ ಕರ್ಕಿ ಗ್ರಾಮದ ಸುಜಾತಾ (40) ಅವರ ಪುತ್ರಿ ಕೀರ್ತನಾ (12), ಹಿರಿಯೂರು ತಾಲ್ಲೂಕಿನ ಪಾಲ್ವನಹಳ್ಳಿ ಗ್ರಾಮದ ಮಹ್ಮದ್ ಯಾಸೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡವರಿಗೆ ಇಲ್ಲಿನ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.