ಸೊರಬ: ತಾಲ್ಲೂಕಿನಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ, ಕೆರೆ, ಕಟ್ಟೆಗಳು ತುಂಬುವ ಹಂತ ತಲುಪಿವೆ.
ಮಳೆ ಬಿರುಸಾಗಿ ಸುರಿಯುತ್ತಿರುವುದರಿಂದ ರೈತರು ನಾಟಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೆಲ ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು, ರೈತರ ಕೃಷಿ ಚಟುವಟಿಕೆ ನಡೆಸಲು ಪೂರಕವಾಗಿದೆ. ತಾಲ್ಲೂಕಿನ ಪ್ರಮುಖ ನದಿಗಳಾದ ವರದಾ ಹಾಗೂ ದಂಡಾವತಿ ನದಿಗಳಲ್ಲಿ ಹರಿಯುವ ನೀರಿನ ಮಟ್ಟ ಹೆಚ್ಚಾಗಿದೆ. ನದಿ ಪಾತ್ರದ ಕೆಲವು ಜಮೀನುಗಳು ಜಲಾವೃತಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.