ADVERTISEMENT

ಶಿವಮೊಗ್ಗ: ಪೊಲೀಸರಿಂದ ಶಾಲಾ ವಾಹನ ತಪಾಸಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2024, 15:42 IST
Last Updated 18 ಜೂನ್ 2024, 15:42 IST
ಶಿವಮೊಗ್ಗದಲ್ಲಿ ಮಂಗಳವಾರ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳನ್ನು ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿ ಮಕ್ಕಳ ಸುರಕ್ಷತೆಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು
ಶಿವಮೊಗ್ಗದಲ್ಲಿ ಮಂಗಳವಾರ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳನ್ನು ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿ ಮಕ್ಕಳ ಸುರಕ್ಷತೆಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿದರು   

ಶಿವಮೊಗ್ಗ: ಇಲ್ಲಿನ ಟ್ರಾಫಿಕ್‌ ಸರ್ಕಲ್‌ನ ಸಿಪಿಐ ಬಿ.ಕೆ.ಲತಾ ಅವರ ನೇತೃತ್ವದಲ್ಲಿ ಮಂಗಳವಾರ ನಗರದ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳ ತಪಾಸಣೆ ನಡೆಸಲಾಯಿತು.

ವಾಹನಗಳಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕಿರುವ ದಾಖಲಾತಿಗಳಾದ ಆರ್.ಸಿ (ನೋಂದಣಿ ಪ್ರಮಾಣ ಪತ್ರ), ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ವಿಮಾ ಪತ್ರ, ಡಿ.ಎಲ್(ಚಾಲನಾ ಪರವಾನಿಗೆ), ಬ್ಯಾಡ್ಜ್ ಹಾಗೂ ಇತರ ದಾಖಲಾತಿಗಳನ್ನು ಮತ್ತು ವಾಹನದಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು. 

ನಂತರ ಚಾಲಕರಿಗೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಬಗ್ಗೆ ಮಾಹಿತಿ ನೀಡಿ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡದೇ ಕಡ್ಡಾಯವಾಗಿ ವೇಗದ ಮಿತಿಯಲ್ಲಿಯೇ ವಾಹನಗಳನ್ನು ಚಾಲನೆ ಮಾಡುವಂತೆ ತಿಳಿಸಲಾಯಿತು.

ADVERTISEMENT

ಚಾಲನೆಯ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಂತೆ, ವಾಹನಗಳನ್ನು ಓಡಿಸುವಾಗ ಮೊಬೈಲ್ ಫೋನ್ ಬಳಕೆ ಮಾಡದಂತೆ ಮತ್ತು ಶಾಲಾ ವಾಹನದಲ್ಲಿ ಲಭ್ಯವಿರುವ ಆಸನಗಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೂರಿಸಿಕೊಂಡು ಹೋಗದಂತೆ ಪೊಲೀಸರು ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.