ಸಾಗರ: ದಲಿತ ಸಮುದಾಯಕ್ಕೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇಲ್ಲಿನ ವರದಹಳ್ಳಿ ರಸ್ತೆಯ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಚ್.ಪಿ.ಮಂಜಪ್ಪ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.
ವನಶ್ರೀ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಬಾಲಕಿ ಮೇಲೆ ಶಾಲೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಮಂಜಪ್ಪ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿ ಮಂಜಪ್ಪ ತಲೆಮರೆಸಿಕೊಂಡಿದ್ದು ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.