ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಗಿಮುದ್ದೆ ಹಾಗೂ ಜೋಳದ ರೊಟ್ಟಿಗೆ ಅಗತ್ಯ ಬೀಳುವ ಆಹಾರ ಧಾನ್ಯ ಖರೀದಿಗೆ ಕೇಂದ್ರ ಸರ್ಕಾರ ಒಪ್ಪದೇ ಇರುವುದನ್ನು ಖಂಡಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟಿನ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಟ್ರಸ್ಟಿ ಕಲ್ಲೂರು ಮೇಘರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಪ್ಪು ಬಟ್ಟೆ ಪ್ರದರ್ಶಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
‘ರಾಜ್ಯದಲ್ಲಿ 55.08 ಲಕ್ಷ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಪಡೆಯುತ್ತಿದ್ದಾರೆ. ಈ ವಿದ್ಯಾರ್ಥಿಗಳಿಗೆ ರಾಗಿ, ಜೋಳದಲ್ಲಿ ತಯಾರಿಸಿದ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವ ಕಳಿಸಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸಿದೆ. ಇದು ಮಕ್ಕಳ ವಿರೋಧಿ ನೀತಿ. ಈ ನಡೆಯನ್ನು ಖಂಡಿಸುತ್ತೇವೆ’ ಎಂದು ಪ್ರತಿಭಟನಕಾರರು ತಿಳಿಸಿದರು.
ಪ್ರಮುಖರಾದ ಎಚ್.ಎಂ. ಸಂಗಯ್ಯ, ಪುಪ್ಪಾವತಿ, ಶಂಕ್ರನಾಯ್ಕ, ಕೆ.ಆರ್. ಶಿವಣ್ಣ, ಸುರೇಶ್ ಕೋಟೆಕಾರ್, ಎಸ್.ಜಿ. ಸುರೇಶ್, ನಾಗೇಶ್ ರಾವ್, ಜಿ.ವಿ. ಮಂಜುಳಾ, ಡಾ.ಶಾಂತಾ ಸುರೇಂದ್ರ, ಗೋಪಾಲಕೃಷ್ಣ, ಎಲ್.ಆರ್. ನರಸಿಂಹಮೂರ್ತಿ, ಪಿ.ಡಿ. ಮಂಜಪ್ಪ, ಟಿ.ಬಿ. ಸೋಮಶೇಖರಯ್ಯ, ಮಂಜ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.