ಸಾಗರ: ಶರಾವತಿ ನದಿಯ ನೀರನ್ನು ಬೆಂಗಳೂರು ನಗರಕ್ಕೆ ಹರಿಸುವ ಯೋಜನೆಯ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ‘ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವ ಯೋಜನೆ ಕುರಿತು ಚರ್ಚೆ ಅಗತ್ಯವಿಲ್ಲ. ಏಕೆಂದರೆ ಯೋಜನೆಯ ಪ್ರಸ್ತಾಪವೇ ಈಗ ಸರ್ಕಾರದ ಮುಂದೆ ಇಲ್ಲ’ ಎಂದರು.
ತಾಲ್ಲೂಕಿನ ಬರೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಕಲ್ಲೊಡ್ಡು ಹಳ್ಳ ಹೊಸಕೆರೆ ನಿರ್ಮಾಣ ಯೋಜನೆಯನ್ನು ಕೂಡ ಕೈಬಿಡಲಾಗಿದೆ. ಪಕ್ಕದ ಶಿಕಾರಿಪುರ ತಾಲ್ಲೂಕಿನಲ್ಲಿ ಏತ ನೀರಾವರಿ ಯೋಜನೆ ಕೈಗೊಳ್ಳಲಾಗುತ್ತಿದ್ದು, ಸಾಗರ ತಾಲ್ಲೂಕಿನ ರೈತರಿಗೆ ಇದರಿಂದ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.
ಶರಾವತಿ ಭೂಗರ್ಭ ಜಲವಿದ್ಯುತ್ ಯೋಜನೆ ಪರಿಸರಕ್ಕೆ ಮಾರಕ ಎಂಬ ದೂರುಗಳು ಕೇಳಿಬಂದಿವೆ. ಶೀಘ್ರ ಯೋಜನಾ ಪ್ರದೇಶಕ್ಕೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.