ADVERTISEMENT

ಗ್ರಾ.ಪಂ. ಅಧ್ಯಕ್ಷರಿಂದ ನಿಂದನೆ: ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 16:13 IST
Last Updated 21 ನವೆಂಬರ್ 2024, 16:13 IST

ರಿಪ್ಪನ್‌ಪೇಟೆ: ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಅವರು ವ್ಯಕ್ತಿಯೊಬ್ಬರಿಗೆ ಏಕವಚನದಲ್ಲಿ ನಿಂದಿಸಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಪ್ರಕರಣದ ತನಿಖೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ನವೆಂಬರ್ 25ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಎನ್. ಸತೀಶ್ ತಿಳಿಸಿದರು.

‘ಊರಿನ ಘನತೆಗೆ ಧಕ್ಕೆ ತಂದಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಧ್ಯಕ್ಷೆ ಧನಲಕ್ಷ್ಮಿ ಹಾಗೂ
ಕಾಂಗ್ರೆಸ್ ಹೋಬಳಿ ಘಟಕ ಅಧ್ಯಕ್ಷ ಗಣಪತಿ, ಗ್ರಾಮ ಪಂಚಾಯಿತಿ ಸದಸ್ಯ ನಿರೂಪಕುಮಾರ್ ಗುಂಡಾ ವರ್ತನೆ ತೋರಿದ್ದಾರೆ. ಈ ಕುರಿತ ಆಡಿಯೊ, ವಿಡಿಯೊ ಎಲ್ಲೆಡೆ ಹರಿದಾಡಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಧ್ಯಕ್ಷರು ಹಾಗೂ ಸದಸ್ಯರ ವರ್ತನೆಯಿಂದ ಜನರು ಬೇಸತ್ತಿದ್ದಾರೆ. ಸಭೆಯೊಂದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಗ್ಗೆಯೂ ತನಿಖೆ ನಡೆಸಬೇಕು. ಈ ಕುರಿತು ಬಿಜೆಪಿಯಿಂದ ಈಗಾಗಲೇ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ವಿಡಿಯೊ ಚಿತ್ರೀಕರಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಎಚ್. ಹರತಾಳು, ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ಪ್ರತಿಭಟನೆಯ ನೇತೃತ್ವ ವಹಿಸುವರು ಎಂದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಮುಖಂಡರಾದ ಆರ್.ಟಿ.ಗೋಪಾಲ, ಪದ್ಮ ಸುರೇಶ್, ನಾಗರತ್ನಾ ದೇವರಾಜ್, ಎಂ.ಬಿ.ಮಂಜುನಾಥ, ಎಂ.ಸುರೇಶ್‌ ಸಿಂಗ್ ಹಾಗೂ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.