ಭದ್ರಾವತಿ: ಇಲ್ಲಿನ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 8ಕ್ಕೆ ಅಂಬೇಡ್ಕರ್ ವೃತ್ತದಿಂದ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ. ಬಳಿಕ ಬೆಳಿಗ್ಗೆ 9ಕ್ಕೆ ತಹಶೀಲ್ದಾರ್ ಕೆ.ಆರ್. ನಾಗರಾಜ್ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ. ಸಂಗಮೇಶ್ವರ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.