ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ 33ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಭಾಷಣದ ವೇಳೆಯೇ ಎನ್‌ಎಸ್‌ಯುಐ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದ್ದರು. ಹಿಂದಿನ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಜುಲೈ 22ರಂದು ಈ ಪ್ರತಿಭಟನೆ ನಡೆಸಲಾಗಿತ್ತು.
ಘಟಿಕೋತ್ಸವ ಸಮಾರಂಭದ ನಂತರ ವಿಶ್ವವಿದ್ಯಾಲಯದ ಆಡಳಿತ ಕಚೇರಿಗೆ ಪ್ರತಿಭಟನಕಾರರು ಹಾಗೂ ಕುಲಪತಿ ಅವರನ್ನು ರಾಜ್ಯಪಾಲರು ಕರೆಸಿಕೊಂಡು ಚರ್ಚಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಎನ್‌ಎಸ್‌ಯುಐನ 11 ಜನ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು.
ಆಗಸ್ಟ್ 8ರಂದು ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿ ನಟ ಪ್ರಕಾಶ್‌ರಾಜ್ ಅವರೊಂದಿಗೆ ಆಯೋಜಿಸಿದ್ದ ಸಂವಾದ ವಿರೋಧಿಸಿ, ಕಾರ್ಯಕ್ರಮದ ನಂತರ ಕೆಲವು ವಿದ್ಯಾರ್ಥಿಗಳು ಸಭಾಂಗಣವನ್ನು ನೀರು ಹಾಕಿ ಸ್ವಚ್ಛಗೊಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.