ಸಾಗರ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶಿವಮೊಗ್ಗದ ವೀರಭದ್ರಪ್ಪ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಸೋಮವಾರ ನಡೆದಿದೆ.
ವೀರಭದ್ರಪ್ಪ ಅವರ ಕುಟುಂಬದ ಆಸ್ತಿಗೆ ಸಂಬಂಧಿಸಿದ ಸಿವಿಲ್ ಪ್ರಕರಣ ಇಲ್ಲಿನ ನ್ಯಾಯಾಲಯದಲ್ಲಿ ನಡೆಯುತ್ತಿದ್ದು ಆ ಸಂಬಂಧ ಅವರು ಸೋಮವಾರ ನ್ಯಾಯಾಲಯಕ್ಕೆ ಆಗಮಿಸಿದ್ದರು. ಆಸ್ತಿ ವಿವಾದದ ವ್ಯಾಜ್ಯದಿಂದ ಮನನೊಂದು ಅವರು ವಿಷ ಸೇವಿಸಿದ್ದಾರೆ ಎನ್ನಲಾಗಿದೆ.
ವಿಷ ಸೇವಿಸಿ ಅಸ್ವಸ್ತಗೊಂಡಿದ್ದ ವೀರಭದ್ರಪ್ಪ ಅವರನ್ನು ಸ್ಥಳದಲ್ಲಿದ್ದವರು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.