ಶಿವಮೊಗ್ಗ: ಟರ್ಕಿ ಹಾಗೂ ಸಿರಿಯಾದಲ್ಲಿನ ಭೂಕಂಪದ ಅವಘಡದಲ್ಲಿ ಸಿಲುಕಿರುವ ಕನ್ನಡಿಗರಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ದೆಹಲಿಯ ಕರ್ನಾಟಕ ಭವನದ ಆಯುಕ್ತರನ್ನು ನೋಡಲ್ ಅಧಿಕಾರಿ ಆಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭೂಕಂಪದಲ್ಲಿ ಸಿಲುಕಿ ಸಂತ್ರಸ್ತರಾದ ಕನ್ನಡಿಗರ ಮಾಹಿತಿ ಇನ್ನೂ ಸಿಕ್ಕಿಲ್ಲ. ಆಯಾ ರಾಯಭಾರ ಕಚೇರಿಗಳೊಂದಿಗೆ ಸಂಪರ್ಕಿಸಿ ತೊಂದರೆಗೀಡಾದವರ ವಿವರ ಸಂಗ್ರಹಿಸುವಂತೆ ಸೂಚಿಸಿದ್ದೇನೆ ಎಂದರು.
ಅಗತ್ಯಬಿದ್ದಲ್ಲಿ ಸಂತ್ರಸ್ತರು ಇಚ್ಛಿಸಿದಲ್ಲಿ ರಾಜ್ಯಕ್ಕೆ ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗುವುದು ಎಂದರು.
ಇದನ್ನು ಓದಿ: ಅನುದಾನ ಸಮರ್ಪಕ ಬಳಕೆಯಿಂದ ಅಭಿವೃದ್ಧಿ: ಸಂಸದ ರಾಘವೇಂದ್ರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.