ADVERTISEMENT

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ– 20 ವರ್ಷ ಕಠಿಣ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 13:30 IST
Last Updated 17 ಆಗಸ್ಟ್ 2022, 13:30 IST
   

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ, ₹60 ಸಾವಿರ ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಸೆರೆವಾಸ ಶಿಕ್ಷೆ ನೀಡಿ ಬುಧವಾರ ಆದೇಶಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 13 ವರ್ಷದ ಬಾಲಕಿಯ ಮೇಲೆ ಎಂ.ಎಚ್. ಮೊಹಮ್ಮದ್ ಮಕ್ಸೂದ್ ಎಂಬಾತ 2021ರ ಜೂನ್ 29ರಂದು ಲೈಂಗಿಕ ದೌರ್ಜನ್ಯವೆಸಗಿದ್ದನು. ಈ ಬಗ್ಗೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ತೀರ್ಥಹಳ್ಳಿ ವೃತ್ತದ ಆಗಿನ ಇನ್‌ಸ್ಪೆಕ್ಟರ್ ಪ್ರವೀಣ್ ನೀಲಮ್ಮನವರ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜೆ.ಎಸ್.ಮೋಹನ್, ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.