ADVERTISEMENT

‘ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ’

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 15:42 IST
Last Updated 5 ಜೂನ್ 2024, 15:42 IST
ತ್ಯಾಗರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಪರಿಸರ ದಿನ ಆಚರಿಸಲಾಯಿತು
ತ್ಯಾಗರ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಪರಿಸರ ದಿನ ಆಚರಿಸಲಾಯಿತು   

ತ್ಯಾಗರ್ತಿ: ಪರಿಸರ ಜಾಗೃತಿ, ಪರಿಸರ ರಕ್ಷಣೆ ಕೇವಲ ಇಲಾಖೆಗೆ ಸೀಮಿಗೊಳ್ಳದೇ ಪ್ರತಿಯೊಬ್ಬರೂ ಅರಣ್ಯ ರಕ್ಷಣೆಗೆ ಒತ್ತು ನೀಡಬೇಕು ಎಂದು ತ್ಯಾಗರ್ತಿ ಉಪವಲಯ ಅರಣ್ಯಾಧಿಕಾರಿ ಮಂಜಪ್ಪ ಸಲಹೆ ನೀಡಿದರು.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪ್ರತಿ ಮಗುವಿನ ಜನ್ಮದಿನವನ್ನು ಒಂದು ಗಿಡ ನೆಟ್ಟು ಪೋಷಣೆ ಮಾಡಿದರೆ ಅರಣ್ಯ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಿದಂತಾಗುತ್ತದೆ’ ಎಂದು ಹೇಳಿದರು.

ADVERTISEMENT

ಗಸ್ತು ಅರಣ್ಯ ಪಾಲಕ ಚರಣ್‌ರಾಜ್ ಎನ್.ಬಿ, ದಾನಶೇಖರ, ಎಚ್‌ಡಿಎಫ್‌ಸಿ ಬ್ಯಾಂಕ್ ವ್ಯವಸ್ಥಾಪಕ ದಯಾನಂದ್ ಹಾಗೂ ಸಿಬ್ಬಂದಿ, ಮುಖ್ಯಶಿಕ್ಷಕ ತಿಮ್ಮಪ್ಪ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.