ಸಾಗರ: ಲಸಿಕೆ ಪಡೆದರೆ ಮಕ್ಕಳಾಗದೆಂಬ ಸಿದ್ದರಾಮಯ್ಯ ಅವರ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಾಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಬಿಜೆಪಿ ಪೇಜ್ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
‘ಕೊರೊನಾ ಲಸಿಕೆ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಸಿದ್ದರಾಮಯ್ಯ ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಆದರೂ ಕಾಂಗ್ರೆಸ್ ನಾಯಕರು ಕೊರೊನಾಕ್ಕೆ ಹೆದರಿ ಲಸಿಕೆ ಹಾಕಿಸಿಕೊಂಡರು. ಲಸಿಕೆ ಪಡೆದರೆ ಮಕ್ಕಳಾಗುವುದಿಲ್ಲ ಎಂಬ ಸಿದ್ದರಾಮಯ್ಯ ಅವರ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ’ ಎಂದು ಅವರು ವ್ಯಂಗ್ಯವಾಡಿದರು.
70 ವರ್ಷಗಳ ಇತಿಹಾಸದಲ್ಲಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸದ ಕಾಂಗ್ರೆಸ್ ನಾಯಕರು ಭಾರತವನ್ನು ಹಾವಾಡಿಗರ, ಸಾಲಗಾರರ ಹಾಗೂ ಸುಳ್ಳುಗಾರರ ದೇಶ ಎಂಬ ಅಪಕೀರ್ತಿಗೆ ಈಡು ಮಾಡಿದ್ದರು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ದೂರಿದರು.
‘ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಮುಸ್ಲಿಮರ ವಿರೋಧವಿಲ್ಲ. ಆದರೆ, ಕಾಂಗ್ರೆಸ್ ವಿರೋಧವಿದೆ. ಪ್ರಧಾನಿ ಮೋದಿ ನಾಯಕತ್ವವನ್ನು ವಿಶ್ವವೇ ಮೆಚ್ಚಿದೆ. ಗಡಿ ವಿವಾದ, ಜಮ್ಮು ಕಾಶ್ಮೀರ ಸಮಸ್ಯೆ ನಿವಾರಣೆ, ಶ್ರೀಲಂಕಾದಿಂದ 3,000 ಮಿನುಗಾರರ ಬಿಡುಗಡೆಯಂಥ ಕೆಲಸ ಮಾಡಿದ್ದಾರೆ. ನಿಜವಾದ ಭಾರತ್ ಜೋಡೊ ಮಾಡುತ್ತಿರುವುದು ಮೋದಿಯೇ ಹೊರತು ರಾಹುಲ್ ಗಾಂಧಿ ಅಲ್ಲ’ ಎಂದು ಹೇಳಿದರು.
ಇವುಗಳನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.