ADVERTISEMENT

ಗಾಂಜಾ, ಡ್ರಗ್ಸ್‌ ಮಾರಾಟ ಜಾಲಕ್ಕೆ ಅಂಕುಶ: ಪರಮೇಶ್ವರ

ಗೃಹ ಸಚಿವ ಡಾ.ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 23:50 IST
Last Updated 26 ಅಕ್ಟೋಬರ್ 2024, 23:50 IST
ಡಾ.ಜಿ.ಪರಮೇಶ್ವರ
ಡಾ.ಜಿ.ಪರಮೇಶ್ವರ   

ಶಿವಮೊಗ್ಗ: ‘ರಾಜ್ಯದಲ್ಲಿ ಗಾಂಜಾ, ಡ್ರಗ್ಸ್‌ ಸೇರಿದಂತೆ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಸಂಪೂರ್ಣ ಅಂಕುಶ ಹಾಕಿ ಅದನ್ನು ಬುಡಸಮೇತ ಕಿತ್ತು ಹಾಕುತ್ತೇವೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. 

‘ಬೆಂಗಳೂರಿನಲ್ಲಿ ಶುಕ್ರವಾರ ₹1.50 ಕೋಟಿ ಮೌಲ್ಯದ ಗಾಂಜಾ ವಶ‍ಪಡಿಸಿಕೊಂಡು ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಲಾಗಿದೆ. ವಾರದ ಹಿಂದೆ ₹ 5 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದರೆ ಆಯಾ ಠಾಣಾ ವ್ಯಾಪ್ತಿಯ ಅಧಿಕಾರಿಗಳು, ಎಸ್ಪಿ ಹಾಗೂ ಡಿಸಿಪಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಕುರಿತು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಸುದ್ದಿಗಾರರಿಗೆ ಶನಿವಾರ ತಿಳಿಸಿದರು.  

‘ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದಿಲ್ಲ. ಜಾತಿ ಗಣತಿ ವರದಿಯನ್ನು ಮೊದಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸುತ್ತೇವೆ. ಆಮೇಲೆ ಅದರ ಜಾರಿ ಕುರಿತು ನೋಡೋಣ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.