ಉಜಿರೆ (ದಕ್ಷಿಣ ಕನ್ನಡ): ಕೇಂದ್ರ ಸರ್ಕಾರದ ಸಹಯೋಗದಲ್ಲಿ ದೇಶದಲ್ಲಿ ಇನ್ನೂ 120 ಹೊಸ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆಗಳನ್ನು ಪ್ರಾರಂಭಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು.
ಧರ್ಮಸ್ಥಳದಲ್ಲಿ ಗುರುವಾರ ನಡೆದ ತಮ್ಮ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ಧರ್ಮಸ್ಥಳದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಭಕ್ತರಿಗೆ ಹಲವು ಸೌಲಭ್ಯ ಒದಗಿಸಲಾಗಿದೆ. ಧರ್ಮಸ್ಥಳದಲ್ಲಿ ಆರಾಮದಾಯಕ ಸರತಿ ಸಾಲಿನ ಸೌಲಭ್ಯವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ನವೆಂಬರ್ 8ರಂದು ಉದ್ಘಾಟಿಸಲಿದ್ದಾರೆ ಎಂದರು.
ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಸದ ಡಾ.ಸಿ.ಎನ್. ಮಂಜುನಾಥ್ ಅನರು ಡಿ.ವೀರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿಮೆ ಅನಾವರಣಗೊಳಿಸಿದರು.
ಹೇಮಾವತಿ ವಿ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.