ತುಮಕೂರು: ಜಿಲ್ಲೆಯಲ್ಲಿ 13 ಸಾವಿರ ಹೆಕ್ಟೇರ್ ಪರಿಭಾವಿತ ಅರಣ್ಯ ಪ್ರದೇಶ ಗುರುತಿಸಲಾಗಿದೆ. ಅರಣ್ಯ, ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆ ಜಂಟಿಯಾಗಿ ಸರ್ವೇ ನಡೆಸಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗುರುತಿಸಲಾಗಿರುವ ಪ್ರದೇಶವನ್ನು ಸರ್ಕಾರಿ, ಖಾಸಗಿ ಪ್ರದೇಶ ಎಂದು ಪ್ರತ್ಯೇಕಿಸಬೇಕು. ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚೀಟಿ, ಬಗರ್ ಹುಕುಂ, ಪಿಂಚಣಿ ಸೇರಿ ವಿವಿಧ ಸೌಲಭ್ಯಕ್ಕೆ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು. ಆಯಾ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮ ಆಡಳಿತಾಧಿಕಾರಿ ಜತೆಗೆ ಪ್ರತಿ ದಿನ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಬಗರ್‌ಹುಕುಂಗೆ ಸಂಬಂಧಿಸಿದಂತೆ ಪ್ರಗತಿ ಸಾಧಿಸಬೇಕು ಎಂದು ನಿರ್ದೇಶಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.