ADVERTISEMENT

ಕಾರು ಉರುಳಿ ಬಿದ್ದು ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 14:36 IST
Last Updated 18 ಅಕ್ಟೋಬರ್ 2024, 14:36 IST

ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರ ಗೊಟ್ಟಿಗೆರೆ ಸಮೀಪ ಶುಕ್ರವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಸೇವಾ ರಸ್ತೆಗೆ ಉರುಳಿ ಬಿದ್ದ ಕಾರಣ ಒಬ್ಬರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಮೃತರನ್ನು ತಮಿಳುನಾಡಿನ ಕೊಯಮತ್ತೂರಿನ ಕಾರ್ತೀಕ (33) ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತ ಅರವಿಂದ್ ಕೃಷ್ಣ, ಚಂದನ್ ಮತ್ತು ರಿಯಾನ್ ಮಲ್ಲಯ್ಯ ಜತೆ ಚನ್ನೈನಿಂದ ಬೆಂಗಳೂರಿಗೆ ಬಂದು ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ಹೊರಟಿದ್ದರು.

ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.