ADVERTISEMENT

2,460 ಅಂಗವಿಕಲರಿಗೆ ಸಾಧನ ಸಲಕರಣೆ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 14:53 IST
Last Updated 30 ಅಕ್ಟೋಬರ್ 2024, 14:53 IST

ತುಮಕೂರು: ವಿವಿಧ ಸಾಧನ ಸಲಕರಣೆ ವಿತರಿಸಲು ಜಿಲ್ಲೆಯಲ್ಲಿ 2,460 ಅಂಗವಿಕಲರನ್ನು ಗುರುತಿಸಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿಲ್ಪಾ ಎಂ.ದೊಡ್ಡಮನಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ಎಡಿಐಪಿ ಯೋಜನೆಯಡಿ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ‘ನವೆಂಬರ್‌ನಲ್ಲಿ ಸಾಧನ ಸಲಕರಣೆ ವಿತರಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್‌, ದಾದಿಯರ ಸೇವೆ ಒದಗಿಸಬೇಕು. ಸುರಕ್ಷತೆಗಾಗಿ ಪೊಲೀಸ್ ಇಲಾಖೆ ನೆರವು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಚಟುವಟಿಕೆ ಆಯೋಜಿಸಬೇಕು’ ಎಂದು ಸೂಚಿಸಿದರು.

ADVERTISEMENT

ಮುಜರಾಯಿ ತಹಶೀಲ್ದಾರ್‌ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಕಾರ್ಯಕ್ರಮದ ನಿರೂಪಣಾಧಿಕಾರಿ ದಿನೇಶ್‌ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.