ತುಮಕೂರು: ನಗರದ ಮರಳೂರು ದಿಣ್ಣೆಯ 12ನೇ ಅಡ್ಡರಸ್ತೆಯಲ್ಲಿ ಶುಕ್ರವಾರ ಅಕ್ರಮವಾಗಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಕಸಾಯಿ ಖಾನೆ ಮೇಲೆ ಪೊಲೀಸರು ದಾಳಿ ನಡೆಸಿ ಮೂರು ಟನ್ ಮಾಂಸ ವಶಕ್ಕೆ ಪಡೆದಿದ್ದಾರೆ.
ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರನ್ನು ಕಂಡ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.