ADVERTISEMENT

ತುಮಕೂರು | ವೈದ್ಯನಿಗೆ ₹36 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 14:38 IST
Last Updated 30 ಜೂನ್ 2024, 14:38 IST
ಸೈಬರ್‌ ಕ್ರೈಮ್‌
ಸೈಬರ್‌ ಕ್ರೈಮ್‌   

ತುಮಕೂರು: ‘ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಉತ್ತಮ ಲಾಭ ಗಳಿಸಬಹುದು’ ಎಂದು ನಂಬಿಸಿ ವೈದ್ಯ, ತಿಪಟೂರಿನ ಎಚ್‌.ವಿದ್ಯಾಸಾಗರ್‌ ಎಂಬುವರಿಗೆ  ₹36.40 ಲಕ್ಷ ವಂಚಿಸಲಾಗಿದೆ.

ವಿದ್ಯಾಸಾಗರ್‌ ಮೊದಲಿಗೆ ‘ಏಂಜೆಲೋನ್‌’ ಎಂಬ ಅಪ್ಲೇಕಶನ್‌ನ ಬಳಸಿಕೊಂಡು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದರು. ಫೇಸ್‌ಬುಕ್‌ನಲ್ಲಿ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸ್‌ ಆ್ಯಪ್‌ ಗ್ರೂಪ್‌ಗೆ ಸೇರಿಸಿದ್ದಾರೆ.

ಸದರಿ ಗ್ರೂಪ್‌ನಲ್ಲಿ ಷೇರು ಮಾರುಕಟ್ಟೆಗೆ ಸಂಬಂಧಿಸಿದ ಮಾಹಿತಿ ಹಂಚಿಕೊಂಡಿದ್ದಾರೆ. ನಂತರ ‘ಎಸ್‌ಎಸ್‌ಎಐಐ’ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ತಿಳಿಸಿದ್ದಾರೆ. ಲಾಭ ಗಳಿಕೆಯ ಆಮಿಷ ಒಡ್ಡಿದ್ದಾರೆ. ಇದನ್ನು ನಂಬಿದ ವಿದ್ಯಾಸಾಗರ್‌ ಜೂನ್‌ 4ರಿಂದ 21ರ ವರೆಗೆ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ₹40.80 ಲಕ್ಷ ಹಣ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಅವರಿಗೆ ₹4.40 ಲಕ್ಷ ವಾಪಸ್‌ ಹಾಕಿದ್ದಾರೆ.

ADVERTISEMENT

‘ಬಾಕಿ ಹಣ ವಾಪಸ್‌ ನೀಡದೆ ವಂಚಿಸಿದ್ದಾರೆ. ಸೈಬರ್‌ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ’ ಸೈಬರ್‌ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.