ADVERTISEMENT

ಬೆಳ್ಳಾವಿ ಕಾಲೇಜಿಗೆ ₹5 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 4:35 IST
Last Updated 23 ಅಕ್ಟೋಬರ್ 2024, 4:35 IST
ಬಿ.ಸುರೇಶ್‌ಗೌಡ
ಬಿ.ಸುರೇಶ್‌ಗೌಡ   

ತುಮಕೂರು: ತಾಲ್ಲೂಕಿನ ಬೆಳ್ಳಾವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಸರ್ಕಾರ ₹5 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಬಿ.ಸುರೇಶ್‌ಗೌಡ ತಿಳಿಸಿದ್ದಾರೆ.

ಬಾಡಿಗೆ ಕಟ್ಟಡದಲ್ಲಿ ಕಾಲೇಜಿನ ತರಗತಿಗಳು ನಡೆಯುತ್ತಿದ್ದು, ಸರ್ಕಾರದ ಅನುದಾನದಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಎರಡು ತಿಂಗಳ ಹಿಂದೆ ಸರ್ಕಾರ 5 ಎಕರೆ ಜಮೀನು ಮಂಜೂರು ಮಾಡಿದೆ. ಇಲ್ಲಿ ನೂತನ ಕಟ್ಟಡ, ಕಾಂಪೌಂಡ್‌ ನಿರ್ಮಿಸಲಾಗುವುದು. ಉಪಕರಣ ಖರೀದಿ, ಇತರೆ ಸೌಲಭ್ಯ ಒದಗಿಸಲು ಅನುದಾನ ಬಳಸಲಾಗುವುದು ಎಂದು ಹೇಳಿದ್ದಾರೆ.

ಈ ಕಾಲೇಜಿನಲ್ಲಿ ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳು ಹೆಚ್ಚಾಗಿ ಅಧ್ಯಯನ ಮಾಡುತ್ತಿದ್ದಾರೆ. ಬೆಳ್ಳಾವಿಯಲ್ಲಿ ಒಂದು ಪ್ರಥಮ ದರ್ಜೆ ಕಾಲೇಜು ಇರಲಿಲ್ಲ. ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಿಂದಿನ ಸರ್ಕಾರದಲ್ಲಿ ನೊಣವಿನಕೆರೆಯಿಂದ ಬೆಳ್ಳಾವಿಗೆ ಕಾಲೇಜು ವರ್ಗಾವಣೆ ಮಾಡಲಾಗಿತ್ತು ಎಂದು ಸ್ಮರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.