ADVERTISEMENT

ತಿಪಟೂರು | ಮಾದಿಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2024, 14:38 IST
Last Updated 30 ಜೂನ್ 2024, 14:38 IST
ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಿಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೋನಿಗೆ ಬಿದ್ದ ಚಿರತೆ
ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಿಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಬೋನಿಗೆ ಬಿದ್ದ ಚಿರತೆ   

ತಿಪಟೂರು: ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಿಹಳ್ಳಿ ಗ್ರಾಮದ ಹೊರವಲಯದಲ್ಲಿ ಭಾನುವಾರ 8 ವರ್ಷದ ಚಿರತೆ ಬೋನಿಗೆ ಬಿದ್ದಿದೆ.

ಮಾದಿಹಳ್ಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಆಗಾಗ ಚಿರತೆ ಕಾಣಿಸಿಕೊಂಡು ಜನರನ್ನು ಆತಂಕಕ್ಕೆ ತಳ್ಳಿತ್ತು. ಚಿರತೆ ಸೆರೆ ಹಿಡಿಯುವಂತೆ ಗ್ರಾಮದ ಜನರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಗೌರಿಶಂಕರ್‌ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು. ಆಹಾರ ಅರಸಿ ಬಂದು ಬೋನಿಗೆ ಬಿದ್ದಿದೆ. ಇದರಿಂದ ಈ ಭಾಗದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಬೋನಿಗೆ ಬಿದ್ದ ಚಿರತೆ ನೋಡಲು ಜನ ಮುಗಿಬಿದ್ದಿದ್ದರು. ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್, ಅರಣ್ಯ ಪಾಲಕ ಕೆ.ಶಿವಪ್ಪ, ಸಿಬ್ಬಂದಿ ರೇವಣಸಿದ್ದಪ್ಪ, ಮಂಜುನಾಥ್‌ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.