ತಿಪಟೂರು: ನಗರದ ಹಾಲ್ಕುರಿಕೆ ರಸ್ತೆ ಹೊರವಲಯದ ಧನಲಕ್ಷ್ಮಿ ತೆಂಗಿನ ಫ್ಯಾಕ್ಟರಿ ಬಳಿ ವ್ಯಕ್ತಿಯೊಬ್ಬರ ಶವ ಮಧ್ಯರಾತ್ರಿ ಪತ್ತೆಯಾಗಿದೆ. ಸುಮಾರು 45 ವರ್ಷ ಎಂದು ಅಂದಾಜಿಸಲಾಗಿದೆ. ತಲೆಗೆ ಗಾಯವಾಗಿದ್ದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ರವಾನಿಸಲಾಗಿದೆ.
ಸ್ಥಳಕ್ಕೆ ಡಿವೈಎಸ್ಪಿ ವಿನಾಯಕ್ ಶೇಟಗೆರಿ, ವೃತ್ತ ನಿರೀಕ್ಷಕ ಸಿದ್ದರಾಮೇಶ್ವರ ಭೇಟಿ ನೀಡಿ ಪರಿಶೀಲಿಸಿದರು. ತಿಪಟೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.