ಶಿರಾ: ರಾಷ್ಟ್ರೀಯ ಹೆದ್ದಾರಿ- 48ರ ಚಿಕ್ಕನಹಳ್ಳಿ ಸಮೀಪದ ಶಿರಾಕುರಿ ಡಾಬಾ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗ ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಗುರುರಾಜ ಜಿ.ಅಬ್ಬಿಗೆರೆ (30) ಹಾಗೂ ಅವರ ಮಗ ರಿಶಾಂಕ್ (2) ಮೃತರು.
ಬೆಂಗಳೂರಿನಿಂದ ಮುಂಡರಗಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಡವಿಗೆರೆ ಸಮೀಪ ಕಾರು ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಗುರುರಾಜ ಹಾಗೂ ರಿಶಾಂಕ್ ಮೃತಪಟ್ಟಿದ್ದಾರೆ. ಗುರುರಾಜ ಪತ್ನಿ ಹರ್ಷಿತ ತೀವ್ರವಾಗಿ ಗಾಯಗೊಂಡಿದ್ದಾರೆ.
ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.