ಶಿರಾ: ಅಂಗವಿಕರಿಗೆ ಸರ್ಕಾರ ಮಾಸಿಕ ₹1,400 ಪಿಂಚಣಿ ನೀಡುತ್ತಿದ್ದು, ಇದು ಅವರಿಗೆ ಯಾವುದಕ್ಕೂ ಸಾಲುತ್ತಿಲ್ಲ. ಆದ್ದರಿಂದ ಅವರ ಪಿಂಚಣಿ ಹೆಚ್ಚಿಸಲು ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿ ಮಾತನಾಡಿದರು.
ಪೌಷ್ಟಿಕಾಂಶದ ಕೊರತೆಯಿಂದ ಅನೇಕ ಮಂದಿ ಅಂಗವಿಕಲತೆಗೆ ಗುರಿಯಾಗುತ್ತಿದ್ದು, ಮನೆಯಲ್ಲಿ ಸಹ ಅವರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಅಂತಹವರಿಗೆ ಬದುಕು ಕಟ್ಟಿಕೊಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದರು.
ಅಂಗವಿಕಲ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುವಂತೆ ಶಾಸಕರ ಅನುದಾನದಲ್ಲಿ ₹10 ಲಕ್ಷ ಅನುದಾನವನ್ನು ಯಂತ್ರಚಾಲಿತ ದ್ವಿಚಕ್ರ ವಾಹನಕ್ಕೆ ಮೀಸಲಿರಿಸುವ ಭರವಸೆ ನೀಡಿದರು.
ಅಂಗವಿಕಲರಿಗೆ ಕುಂದುಕೊರತೆಗಳನ್ನು ವಿಚಾರಿಸಿದ ಶಾಸಕರು 56 ಮಂದಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹರೀಶ್, ನಗರಸಭೆ ಅಧ್ಯಕ್ಷ ಜೀಷನ್ ಮಹಮೂದ್, ಚಿತ್ತಪ್ಪ, ಮಾಗೋಡು ಕಂಬಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜ್, ಆಶ್ರಯ ಸಮಿತಿ ಸದಸ್ಯ ವಾಜರಹಳ್ಳಿ ರಮೇಶ್, ಪಿ.ಬಿ.ನರಸಿಂಹಯ್ಯ, ಯಲದಬಾಗಿ ನವೀನ್, ಎಂ.ಸಿ.ರಾಘವೇಂದ್ರ, ಸುಧಾಕರ್ ಗೌಡ, ಮಹದೇವಮ್ಮ, ಬೇವಿನಹಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.