ADVERTISEMENT

ಗುಬ್ಬಿ | ರೈಲ್ವೆ ಗೇಟ್‌ ಉನ್ನತಿಕರಿಸಲು ಕ್ರಮ: ಸಚಿವ ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 5:44 IST
Last Updated 27 ಅಕ್ಟೋಬರ್ 2024, 5:44 IST
ಗುಬ್ಬಿಯಲ್ಲಿ ರೈಲು ನಿಲ್ದಾಣದ ಮೇಲ್ಸೇತುವೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ವಿ ಸೋಮಣ್ಣ.
ಗುಬ್ಬಿಯಲ್ಲಿ ರೈಲು ನಿಲ್ದಾಣದ ಮೇಲ್ಸೇತುವೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ವಿ ಸೋಮಣ್ಣ.   

ಗುಬ್ಬಿ: ‘ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ತಾಲ್ಲೂಕಿನಲ್ಲಿ ಶನಿವಾರ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿ ವೀಕ್ಷಣೆ ಹಾಗೂ ಪಟ್ಟಣದ ರೈಲ್ವೆ ನಿಲ್ದಾಣದ ಲಘು ಮೇಲ್ಸೇತುವೆ ನಿರ್ಮಾಣದ ಬಗ್ಗೆ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜಕೀಯಕ್ಕಿಂತ ಅಭಿವೃದ್ಧಿ ಮುಖ್ಯ. ಪಟ್ಟಣದ ಜನರ ಬಹು ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ರೈಲ್ವೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಸ್ತುತ ಯೋಜನೆಗೆ ಬದಲಾಗಿ ಮೇಲ್ಸೇತುವೆ ರಸ್ತೆಯನ್ನು 25 ಅಡಿಗಳಿಗೆ ವಿಸ್ತರಿಸುವಂತೆ ದೂರವಾಣಿ ಮೂಲಕ ನಿರ್ದೇಶನ ನೀಡಿದರು.

ADVERTISEMENT

ತಾಲ್ಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿಗೆ ಅಡೆತಡೆಯಾಗಿದ್ದ ಕೆಲವು ಸಮಸ್ಯೆಗಳನ್ನು ಬಗೆಹರಿಸಿರುವುದರಿಂದ ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು.

ರೈಲ್ವೆ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ನಂತರ ಚನ್ನಬಸವೇಶ್ವರ ಸ್ವಾಮಿ ಹೆಸರಿಡಲು ಸ್ಥಳೀಯರು ಒತ್ತಾಯಿಸುತ್ತಿರುವುದರಿಂದ ಸರ್ಕಾರಗಳ ಜೊತೆ ಚರ್ಚಿಸಿ ಪ್ರಯತ್ನಿಸಲಾಗುವುದು ಎಂದರು.

ಜಿಲ್ಲೆಯ ಬಹುತೇಕ ರೈಲ್ವೆ ಗೇಟ್‌ಗಳನ್ನು ಉನ್ನತಿಕರಿಸಲು ಕ್ರಮ ಕೈಗೊಂಡಿದ್ದು ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ರೈಲ್ವೆ ಇಲಾಖೆ ಅಧಿಕಾರಿಗಳು, ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಫೋಟೋ02ಸುದ್ದಿ01: ಪಟ್ಟಣದ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಾರಂಭವಾಗಬೇಕಾಗಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.