ತುಮಕೂರು: ಎಐಡಿಎಸ್‌ಒ ಸಂಘಟನೆಯ 8ನೇ ರಾಜ್ಯ ಮಟ್ಟದ ವಿದ್ಯಾರ್ಥಿ ಸಮ್ಮೇಳನದ ಪ್ರಯುಕ್ತ ನಗರದಲ್ಲಿ ಶುಕ್ರವಾರ ಬೃಹತ್ ಜಾಥಾ ನಡೆಯಿತು.
ಸಮ್ಮೇಳನದ ಅಂಗವಾಗಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದ ಮೊದಲ ಭಾಗವಾಗಿ ನಗರದ ಜೂನಿಯರ್ ಕಾಲೇಜು ಮೈದಾನದ ಬಳಿ ಜಾಥಾಗೆ ಚಾಲನೆ ನೀಡಲಾಯಿತು. ಬಿ.ಎಚ್.ರಸ್ತೆಯ ಮೂಲಕ ಸಾಗಿದ ಜಾಥಾವು ಬಿಜಿಎಸ್ ವೃತ್ತದಿಂದ ಅಶೋಕ ರಸ್ತೆಯ ಮುಖಾಂತರ ಸಾಗಿ ಸಮ್ಮೇಳನದ ವೇದಿಕೆ ಕಾರ್ಯಕ್ರಮ ನಡೆಯುವ ಗಾಜಿನಮನೆಯ ಹತ್ತಿರ ಕೊನೆಗೊಂಡಿತು.
ಜಾಥಾದಲ್ಲಿ ಜಿಲ್ಲೆ ಒಳಗೊಂಡಂತೆ ಹೊರ ಜಿಲ್ಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‘ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ವಿದ್ಯಾರ್ಥಿಗಳೇ ಒಂದಾಗಿ ಹೋರಾಟಕ್ಕೆ ಮುಂದಾಗಿ, ಅತಿಥಿ ಶಿಕ್ಷಕರ ಹಕ್ಕುಗಳನ್ನು ರಕ್ಷಿಸಿ, ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಿ’ ಎಂಬ ನಾಮಫಲಕ ಹಿಡಿದು ಸಾಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.