ADVERTISEMENT

ಕುಣಿಗಲ್ | ರಸ್ತೆ ವಿಭಜಕಕ್ಕೆ ಆಂಬುಲೆನ್ಸ್ ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 9:08 IST
Last Updated 2 ಜುಲೈ 2024, 9:08 IST
   

ಕುಣಿಗಲ್: ಆಂಬುಲೆನ್ಸ್ ವಾಹನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಸಿಂಗೋನಹಳ್ಳಿ ಅಗ್ರಹಾರ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.

ಮೃತನನ್ನು ಮುಳಬಾಗಿಲಿನ ಶ್ರೀಕಾಂತ (26) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಶವವನ್ನು ಮಂಗಳೂರಿಗೆ ತಲುಪಿಸಿ, ಹಿಂತಿರುಗುವ ಸಮಯದಲ್ಲಿ ಅಪಘಾತ ಸಂಭವಿಸಿದೆ. ಜತೆಯಲ್ಲಿದ್ದ ಮತ್ತೊಬ್ಬ ಚಾಲಕ ವೆಂಕಟೇಶ ಗಾಯಗೊಂಡಿದ್ದಾರೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.